ಇಚ್ಲಂಪಾಡಿ ನೇರ್ಲಶಾಲೆಯಲ್ಲಿ ಗಾಂಧಿ ಮತ್ತು ಶಾಸ್ತ್ರಿ ಅವರ ಜಯಂತಿ ಆಚರಣೆ

ಇಚ್ಲಂಪಾಡಿ ನೇರ್ಲಶಾಲೆಯಲ್ಲಿ ಗಾಂಧಿ ಮತ್ತು ಶಾಸ್ತ್ರಿ ಅವರ ಜಯಂತಿ ಆಚರಣೆ

ಇಚ್ಲಂಪಾಡಿ ನೇರ್ಲ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅ.2 ರಂದು ಆಚರಿಸಲಾಯಿತು.

ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಗಾಂಧೀಜಿಯವರಿಗೆ ಪ್ರಿಯವಾದ ಭಜನೆಗಳನ್ನು ಹಾಡಲಾಯಿತು.

ಕಾರ್ಯಕ್ರಮದಲ್ಲಿ ಎಸ್‌.ಡಿ.ಎಂ.ಸಿ ಅಧ್ಯಕ್ಷ ವಸಂತ ಬಿಜೇರು ಹಾಗೂ ಶಿಕ್ಷಕ ಡಾ.ಗಿರೀಶ್ ಮಾತನಾಡಿ ಮಹಾತ್ಮ ಗಾಂಧೀಜಿ ಅವರ ತತ್ವಗಳಾದ ಅಹಿಂಸೆ, ಸತ್ಯ, ಪ್ರಾಮಾಣಿಕತೆ, ಸ್ವಾಭಿಮಾನ, ಸರಳತೆಯನ್ನು ಮಕ್ಕಳಿಗೆ ತಿಳಿಸಿ ಜೀವನದಲ್ಲಿ ಅಳವಡಿಸುವಂತೆ ಹೇಳಿದರು. ಜೊತೆಗೆ ರಾಷ್ಟ್ರೀಯ ಸ್ವಚ್ಛತಾ ದಿವಸದ ಮಹತ್ವವನ್ನು ತಿಳಿಸಿದರು.

ಶಾಲಾ ಶಿಕ್ಷಕ ವೃಂದ, ಎಸ್‌.ಡಿ.ಎಂ.ಸಿ ಸದಸ್ಯರು, ಪೋಷಕರು ಮತ್ತು ಶಾಲಾ ಮಕ್ಕಳು ಭಾಗವಹಿಸಿದರು. ಮುಖ್ಯಶಿಕ್ಷಕಿ ಜಯಶ್ರೀ ಎಸ್ ಸ್ವಾಗತಿಸಿ, ವಂದಿಸಿದರು.

Leave a Reply

You May Have Missed

error: Content is protected !!