ದ್ವಿಚಕ್ರಗಳೆರಡರ ಅಪಘಾತ;ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

ದ್ವಿಚಕ್ರಗಳೆರಡರ ಅಪಘಾತ;ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್- ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ‌ಅ.2ರ ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ‌ಘಟನೆ ಅ.3ರ ಗುರುವಾರ ನಡೆದಿದೆ.

ಬರಿಮಾರು ನಿವಾಸಿ ಸರ್ಪಾಝ್(33) ಮೃತಪಟ್ಟ ವ್ಯಕ್ತಿಯಾಗಿದ್ದು, ಸಹ ಸವಾರಿಣಿ ವಿದ್ಯಾರ್ಥಿ ಜಾಸ್ಮೀನ್(18) ಗಾಯಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಸರ್ಪಾಝ್ ತನ್ನ ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಎದುರಿನಿಂದ ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಇಂಮ್ತಿಯಾಜ್ ಎಂಬಾತ ಇವರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿ ರಭಸಕ್ಕೆ ಸ್ಕೂಟರ್ ಸವಾರ ಹಾಗೂ ಸಹಸವಾರಿಣಿ ಅಣ್ಣ-ತಂಗಿ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ‌ಗಾಯವಾಗಿತ್ತು.

ಕೂಡಲೇ ಇಬ್ಬರನ್ನೂ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಗಂಭೀರವಾಗಿ ಗಾಯಗಳಾಗಿದ್ದ ಸರ್ಪಾಝ್ ಚಿಕಿತ್ಸೆ ಫಲಕಾರಿಯಾಗದೆ ಅ.3ರ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Previous post

ನೆಲ್ಯಾಡಿ ವಿವಿ ಕಾಲೇಜಿನಲ್ಲಿ ‘ವೃತ್ತಿ ಮಾರ್ಗದರ್ಶನ ಮತ್ತು ಸಮಾಲೋಚನಾ’ ಸಮಿತಿಯ ಉದ್ಘಾಟನೆ ಮತ್ತು ಉದ್ಯೋಗ ತರಬೇತಿ ಕಾರ್ಯಾಗಾರ

Next post

ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Leave a Reply

You May Have Missed

error: Content is protected !!