ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರ ನಿಧನ

ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರ ನಿಧನ

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್(31) ಮೃತಪಟ್ಟ ಬೈಕ್ ಸವಾರರಾಗಿದ್ದಾರೆ.

ವೇಗವಾಗಿ ಬಂದ ಬೈಕ್ ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಹೊಡೆತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಸುಧೀಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಪೊಲೀಸರು ಘಟನಾ ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Leave a Reply

You May Have Missed

error: Content is protected !!