ಉಜಿರೆ ಸಾಫ್ಟ್ ವೇರ್ ಇಂಜಿನಿಯರ್ ಹೃದಯಾಘಾತದಿಂದ ನಿಧನ

ಉಜಿರೆ ಸಾಫ್ಟ್ ವೇರ್ ಇಂಜಿನಿಯರ್ ಹೃದಯಾಘಾತದಿಂದ ನಿಧನ

ಉಜಿರೆ: ಸಾಫ್ಟ್ ವೇರ್ ಇಂಜಿನಿಯರ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅ.11 ರಂದು ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ರಮೇಶ್ ಭಟ್ ಪುತ್ರ ಆದಿತ್ಯ ಭಟ್(30) ಮೃತ ಯುವಕ. ಶುಕ್ರವಾರ ಮನೆಯಲ್ಲಿ ನಡೆದ ಆಯುಧ ಪೂಜೆಯ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದ ತಕ್ಷಣ ಮನೆಯವರು ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾರೆ. ಅದರೆ ಅಷ್ಟೊತ್ತಿಗಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಆದಿತ್ಯ ಭಟ್ ಪ್ರತಿಭಾನ್ವಿತರಾಗಿದ್ದು ಜರ್ಮನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಮೃತರು ತಂದೆ, ತಾಯಿ, ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!