ಕೊಕ್ಕಡ-ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕೊಕ್ಕಡ-ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕೊಕ್ಕಡ: ಕೊಕ್ಕಡ-ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಟ್ರಸ್ಟ್ ನವರಾತ್ರಿ ನಿರ್ವಹಣಾ ಸಮಿತಿ ವತಿಯಿಂದ ನವರಾತ್ರಿ ಉತ್ಸವ ಪ್ರಯುಕ್ತ ಶುಕ್ರವಾರ ರಂಗಪೂಜೆ ಹಾಗೂ ದುರ್ಗಾಪೂಜೆ ನಡೆಯಿತು.

ಒಂಬತ್ತು ದಿನಗಳ ಕಾಲ ಅತಿ ವಿಜ್ರಂಭಣೆಯಿಂದ ನಡೆದ ಕಾರ್ಯಕ್ರಮದಲ್ಲಿ ಭಕ್ತರಿಂದ ಹಸಿರು ಕಾಣಿಕೆ ಸಮರ್ಪಣೆ, ಮಹಿಳೆಯರಿಂದ ಕುಂಕುಮಾರ್ಚನೆ, ವಿವಿಧ ಭಜನಾ ತಂಡಗಳಿಂದ ಭಜನೆ, ವಾಹನ ಪೂಜೆ, ಅನ್ನಸಂತರ್ಪಣೆ ನಡೆಯಿತು.

ನವರಾತ್ರಿ ನಿರ್ವಹಣಾ ಸಮಿತಿಯ ಅಧ್ಯಕ್ಷ ದೇವರಾಜ್ ಹೊಸಹೊಕ್ಲು, ಪವಿತ್ರಪಾಣಿ ಸೂರ್ಯನಾರಾಯಣ ಯಡಪಡಿತ್ತಾಯ, ಅರ್ಚಕ ಮಂಜುನಾಥ ಭಟ್, ಯುವ ಕೇಸರಿ ಅಧ್ಯಕ್ಷ ರಾಘವ ಗೌಡ, ಟ್ರಸ್ಟ್ ನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ದುರ್ಗಾ ವಾಹಿನಿ ಮಹಿಳಾ ತಂಡದ ಅಧ್ಯಕ್ಷೆ ರಮ್ಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!