ನೆಲ್ಯಾಡಿ ಗ್ರಾ.ಪಂ ಸದಸ್ಯ ಜಯಾನಂದ ಬಂಟ್ರಿಯಾಲ್, ಸುಚಿತ್ರಾ.ಜೆ ಬಂಟ್ರಿಯಾಲ್ ದಂಪತಿಗಳು ಬಿಜೆಪಿ ಸೇರ್ಪಡೆ

ನೆಲ್ಯಾಡಿ ಗ್ರಾ.ಪಂ ಸದಸ್ಯ ಜಯಾನಂದ ಬಂಟ್ರಿಯಾಲ್, ಸುಚಿತ್ರಾ.ಜೆ ಬಂಟ್ರಿಯಾಲ್ ದಂಪತಿಗಳು ಬಿಜೆಪಿ ಸೇರ್ಪಡೆ

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯ, ಮಾಜಿ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಹಾಗೂ ಅವರ ಪತ್ನಿ, ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರಾ.ಜೆ ಬಂಟ್ರಿಯಾಲ್ ಅವರು ಅ.15‌ರಂದು ಬಂಟ್ವಾಳದಲ್ಲಿ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಬಂಟ್ವಾಳದಲ್ಲಿ ನಡೆದ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನ ಸಭೆ ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಹಾಗೂ ಇನ್ನಿತರ ಪ್ರಮುಖ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಯಾನಂದ ಬಂಟ್ರಿಯಾಲ್ ಅವರು ನೆಲ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಪ್ರಸ್ತುತ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ, ನೆಲ್ಯಾಡಿ ಜೆಸಿಐ ಪೂರ್ವಾಧ್ಯಕ್ಷರಾಗಿಯೂ. ಪ್ರಸ್ತುತ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ, ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ನೆಲ್ಯಾಡಿ ಸರಕಾರಿ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಅಧ್ಯಕ್ಷರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ. ಸುಚಿತ್ರಾ ಜೆ ಬಂಟ್ರಿಯಾಲ್ ಅವರು ಪ್ರಸ್ತುತ ನೆಲ್ಯಾಡಿ ಜೆಸಿಐ ಅಧ್ಯಕ್ಷೆಯಾಗಿದ್ದು ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಕೊಂಡಿದ್ದಾರೆ.

Leave a Reply

You May Have Missed

error: Content is protected !!