ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತವೊಂದರಲ್ಲಿ ಮೃತಪಟ್ಟ ಘಟನೆ ಅ.18ರ ಶುಕ್ರವಾರ ನಡೆದಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ, ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್(49) ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ.

ಭಾಸ್ಕರ್ ಅವರು ಅ.17ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ನಡುವೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು(ಅ.18) ಬೆಳಗ್ಗೆ ನಿಧನರಾಗಿದ್ದಾರೆ.

Leave a Reply

You May Have Missed

error: Content is protected !!