ಇಂಟ್ರಾ ಗೂಡ್ಸ್ ವಾಹನದಲ್ಲಿ ಅಕ್ರಮ ದನ‌ ಸಾಗಾಟ; ಇಬ್ಬರು ಪೊಲೀಸ್ ವಶಕ್ಕೆ

ಇಂಟ್ರಾ ಗೂಡ್ಸ್ ವಾಹನದಲ್ಲಿ ಅಕ್ರಮ ದನ‌ ಸಾಗಾಟ; ಇಬ್ಬರು ಪೊಲೀಸ್ ವಶಕ್ಕೆ

ಬೆಳ್ತಂಗಡಿ : ಇಂಟ್ರಾ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ದನ‌ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಕೊಟ್ಟಿಗೆಹಾರ ಬಿನ್ನಾಡಿ ಗ್ರಾಮದ ನಿವಾಸಿಗಳಾದ ವಾಹನದ ಚಾಲಕ ಅಶ್ವಥ್ (34)ಹಾಗೂ ಸಹಚರ ಸಚಿನ್ (27) ಬಂಧಿತ ಆರೋಪಿಗಳು. ಯಾವುದೇ ಪರವಾನಿಗೆಯಿಲ್ಲದೇ ಗೋ ಸಾಗಾಟ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸರು ಶುಕ್ರವಾರ ರಾತ್ರಿ ವೇಳೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಪರಿಶೀಲನೆ ನಡೆಸಿದಾಗ ಇಂಟ್ರಾ ಗೂಡ್ಸ್ ವಾಹನದಲ್ಲಿ ಎರಡು ದನಗಳು, ಒಂದು ಕರು, ಹಾಗೂ ಒಂದು ಹೋರಿಯನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಆರೋಪಿಗಳ ಬಳಿ ಯಾವುದೇ ಸೂಕ್ತ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ದನಗಳನ್ನು ಹಾಗೂ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

You May Have Missed

error: Content is protected !!