ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆ ಆಯೋಜಿಸಿದ ಉಪ್ಪಿನಂಗಡಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಂತ ಜಾರ್ಜ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

14ರ ವಯೋಮಾನದ ಬಾಲಕರ ವಿಭಾಗದಲ್ಲಿ ಮಹಮ್ಮದ ಮುರ್ ತಾಲ 600ಮೀ ಓಟ, ಹಾಗೂ ಗುಂಡು ಎಸೆತದಲ್ಲಿ ಪ್ರಥಮ, ಡಿಸ್ಕಸ್ ಎಸೆತದಲ್ಲಿ ದ್ವಿತೀಯ ಸ್ಥಾನ ಹಾಗೂ 4*100ಮೀಟರ್ ರಿಲೇ ಓಟದಲ್ಲಿ ಮಹಮ್ಮದ್ ಮುರ್ ತಾಲ, ಯಶವಂತ್, ಪ್ರಕಾಶ್ ಹಾಗೂ ಉತ್ತಮ್ ತಂಡ ತೃತೀಯ ಸ್ಥಾನ ಪಡೆದಿದ್ದಾರೆ.

14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಶಝಾ ಫಾತಿಮಾ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ .

17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಬೆಲ್ಸಿಟಾ ಜಾಸ್ಮಿನ್ 100 ಮೀಟರ್ ಹಾಗೂ 200ಮೀಟರ್ ಓಟದಲ್ಲಿ ಪ್ರಥಮ ಹಾಗೂ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ವೈಯುಕ್ತಿಕ ಚಾಂಪಿಯನ್ ಆಗಿರುತ್ತಾರೆ. ಲೆನಾ ಬಿನೋಜ್ ತ್ರಿವಿಧ ಜಿಗಿತ ಪ್ರಥಮ, ಉದ್ದ ಜಿಗಿತ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ, ಚಂದನ ಕೆ.ವಿ ಡಿಸ್ಕಸ್ ಎಸೆತ ದಲ್ಲಿ ಪ್ರಥಮ, ಸೋನಾ ಎತ್ತರ ಜಿಗಿತದಲ್ಲಿ ಪ್ರಥಮ, 4*100 ಮೀಟರ್ ರಿಲೇ ಯಲ್ಲಿ ಬೆಲ್ಸಿಟಾ ಜಾಸ್ಮಿನ್, ಇವಾ, ಶಮ್ಯ, ಲೆನಾ ಬಿನೋಜ್ ತಂಡ ಪ್ರಥಮ ಸ್ಥಾನ ಗಳಿಸುವುದರ ಮೂಲಕ ಬಾಲಕಿಯರ ವಿಭಾಗದ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

17ರ ವಯೋಮಾನದ ಬಾಲಕರ ವಿಭಾಗದಲ್ಲಿ ಅಕ್ಷಯ್ ಎತ್ತರ ಜಿಗಿತದಲ್ಲಿ ದ್ವಿತೀಯ, ಹಾಗೂ ಪುನೀತ್ ರಾಜ್ ತ್ರಿವಿಧ ಜಿಗಿತದಲ್ಲಿ ತೃತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

Previous post

ಕೊಕ್ಕಡ ರಾಷ್ಟ್ರೀಕೃತ ಬ್ಯಾಂಕ್ ಶಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಸೈಬರ್ ಅಪರಾಧ!

Next post

ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಗೋಳಿತ್ತೊಟ್ಟು ಗ್ರಾ.ಪಂ.ಕಚೇರಿ ಮುಂಭಾಗದಲ್ಲಿ ಗ್ರಾಮಸ್ಥರಿಂದ ಪ್ರತಿಭಟನೆ

Leave a Reply

You May Have Missed

error: Content is protected !!