ನೆಲ್ಯಾಡಿ ಸಂತ ಜಾರ್ಜ್ ಪ್ರೌಢಶಾಲೆಯ ವಿದ್ಯಾರ್ಥಿ ಐ.ಟಿ ಕ್ವಿಜ್ ಸ್ಪರ್ಧೆಯಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಟಾಟಾ ಕನ್ಸಲ್ಟೆನ್ಸಿಯವರು ಆಯೋಜಿಸಿದ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಸಂತ ಜಾರ್ಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಅನುಪ್ ಮಧು ಅವರು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕರಾದ ಮಧು ಎ.ಜೆ ಹಾಗೂ ಕೊಕ್ಕಡ ಸರಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಶಿಕ್ಷಕಿ ರೀನಾ.ಎಸ್ ಅವರ ಪುತ್ರ.
ಇವರ ಸಾಧನೆಗೆ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್, ವಿದ್ಯಾಸಂಸ್ಥೆಯ ಸಂಚಾಲಕರಾದ ನೋಮಿಸ್ ಕುರಿಯಕೋಸ್, ವಿದ್ಯಾ ಸಂಸ್ಥೆಯ ಮುಖ್ಯಸ್ಥರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಶುಭ ಹಾರೈಸಿದರು.






















Leave a Reply