ನೆಲ್ಯಾಡಿ: ಲಾರಿ,ಕಾರುಗಳ ನಡುವೆ ಅಪಘಾತ; ಕಾರು ಜಖಂ

ನೆಲ್ಯಾಡಿ: ಲಾರಿ,ಕಾರುಗಳ ನಡುವೆ ಅಪಘಾತ; ಕಾರು ಜಖಂ

ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಲಾರಿ ಹಾಗೂ ಕಾರು ನ ಮಧ್ಯೆ ಅಪಘಾತ ಸಂಭವಿಸಿ ಕಾರು ಜಖಂಗೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಲಾರಿ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಎದುರಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು. ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ನಿವಾಸಿ ಗಿರೀಶ್ ಎಚ್.ಬಿ, ಅವರ ಪತ್ನಿ ಬಿಂದು ಹಾಗೂ ಸಹ ಪ್ರಯಾಣಿಕೆ ಸುನಿತಾ ಅವರು ಗಾಯಗೊಂಡಿದ್ದಾರೆ.

ಲಾರಿ ಚಾಲಕ ರವೀಂದ್ರ ರೆಡ್ಡಿ ಅವರ ವಿರುದ್ಧ ಕಾರು ಚಾಲಕ ಗಿರೀಶ್.ಎಚ್.ಬಿ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!