ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ; ಮಹಿಳೆ ಗಂಭೀರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ; ಮಹಿಳೆ ಗಂಭೀರ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೂವರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ(ನ.4) ನಡೆದಿದೆ.

ಕಾರು ಉಜಿರೆಯಿಂದ ಮೂಡಿಗೆರೆ ಮಾರ್ಗವಾಗಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿ ಎಡಬದಿಯಲ್ಲಿ ಕುಳಿತ್ತಿದ್ದ ಮಹಿಳೆಗೆ ತಲೆ ಭಾಗಕ್ಕೆ ಗಂಭೀರ ಏಟಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾರಿನಲ್ಲಿದ್ದ ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Reply

You May Have Missed

error: Content is protected !!