ಕಡಬ ಸೈಂಟ್ ಆನ್ಸ್ ಶಾಲೆಯಲ್ಲಿ ಬಿಸಿಯೂಟ ಯೋಜನೆ ಜಾರಿ

ಕಡಬ ಸೈಂಟ್ ಆನ್ಸ್ ಶಾಲೆಯಲ್ಲಿ ಬಿಸಿಯೂಟ ಯೋಜನೆ ಜಾರಿ

ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಪೋಷಕಾಂಶ ಭರಿತ ಆಹಾರವನ್ನು ಒದಗಿಸುವ ದೃಷ್ಟಿಯಿಂದ ಕಡಬ ಸೈಂಟ್ ಆನ್ಸ್ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟದ ಯೋಜನೆಯನ್ನು ಪ್ರಾರಂಭಿಸಲಾಯಿತು. ಇದರ ಉದ್ಘಾಟನೆಯನ್ನು ಸೈಂಟ್ ಜೋಕಿಮ್ ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಜೇಸಿಂತಾ ವೇಗಸ್ ಮತ್ತು ರಕ್ಷಕ -ಶಿಕ್ಷಕ ಸಂಘದ ಉಪಾಧ್ಯಕ್ಷ ಗಿರಿಧರ್ ರೈ ನೆರವೇರಿಸಿದರು.

ಸಂಸ್ಥೆಯ ಸಂಚಾಲಕರಾದ ವಂ.ಪ್ರಕಾಶ್ ಪೌಲ್ ಡಿಸೋಜಾ ದೇವರ ಆಶೀರ್ವಚನವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳು, ಶಿಕ್ಷಕ – ಶಿಕ್ಷಕೇತರ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲರಾದ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ದಕ್ಷ ವಂದಿಸಿದರು.

Leave a Reply

You May Have Missed

error: Content is protected !!