ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಯತ್ನ: ಸ್ಥಳೀಯರಿಂದ ರಕ್ಷಣೆ!

ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಯತ್ನ: ಸ್ಥಳೀಯರಿಂದ ರಕ್ಷಣೆ!

ಗುರುಪುರ ಬಳಿ ಪುಟ್ಟ ಮಗುವನ್ನು ಹಿಡಿದುಕೊಂಡಿದ್ದ ವ್ಯಕ್ತಿಯೊಬ್ಬ ಸೇತುವೆಯಿಂದ ಜಿಗಿದು ಆತ್ಮಹತ್ಯೆಗೆ ಮುಂದಾದ ವೇಳೆ ಸ್ಥಳೀಯರು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ ಘಟನೆ ರವಿವಾರ(ನ10) ರಂದು ನಡೆದಿದೆ.

ಕಂದಾವರ ಪಡ್ಡಾಯಿ ಪದವಿನ ಸಂದೀಪ್(34) ಎಂಬಾತ 2 ವರ್ಷದ ಮಗುವನ್ನು ಹಿಡಿದುಕೊಂಡು ಸೇತುವೆ ಮೇಲೆ ನಿಂತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಳ್ಳುತ್ತಿದ್ದ. ಈ ವೇಳೆ ಸ್ಥಳೀಯ ಕೆಳಗೆ ಹಾರಬೇಡ ಎಂದು ಒತ್ತಾಯಿಸಿದ್ದಾರೆ. ಆತ ಯಾರೂ ಹತ್ತಿರ ಬರಬೇಡಿ ಎಂದು ಕೂಗಿ ಕೊಂಡಿದ್ದಾರೆ. ಕೊನೆಗೂ ಸ್ಥಳೀಯರು ಆತನನ್ನು ಹಿಡಿದು ಮಗುವಿನ ರಕ್ಷಣೆ ಮಾಡಿದ್ದಾರೆ.

ಕೌಟುಂಬಿಕ ಕಲಹದಿಂದ ನೊಂದು ಆತ್ಮಹತ್ಯೆಗೆ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಸ್ಥಳೀಯರು ಬುದ್ದಿ ಮಾತು ಹೇಳಿ ಮನೆಗೆ ಕಳುಹಿಸಿದ್ದಾರೆ. ಘಟನೆಯ ದೃಶ್ಯಾವಳಿಗಳ ವಿಡಿಯೋ ಸೆರೆಯಾಗಿದೆ.

ನಿರಂತರ ಜಗಳ ನಡೆಯುತ್ತಿದ್ದ ಕಾರಣದಿಂದ ಸಂದೀಪ್ ವಿರುದ್ಧ ಪತ್ನಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು ಎಂದು ತಿಳಿದು ಬಂದಿದೆ.

Leave a Reply

You May Have Missed

error: Content is protected !!