ಮಣ್ಣಗುಂಡಿ: ಡಿವೈಡರ್‌ಗೆ ಕಾರು ಡಿಕ್ಕಿ ಕುಂಬ್ರ ನಿವಾಸಿ ಮೃತ್ಯು

ಮಣ್ಣಗುಂಡಿ: ಡಿವೈಡರ್‌ಗೆ ಕಾರು ಡಿಕ್ಕಿ ಕುಂಬ್ರ ನಿವಾಸಿ ಮೃತ್ಯು

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ.

ಶಿರಾಡಿ ಗಡಿ ದೇವಸ್ಥಾನಕ್ಕೆ ಸ್ನೇಹಿತರೊಂದಿಗೆ 5ಕಾರುಗಳಲ್ಲಿ ಬಂದಿದ್ದು ಪೂಜೆ ಮುಗಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ.

ಮೃತ ಪಟ್ಟವರನ್ನು ಕುಂಬ್ರದ ಅರಿಯಾಡ್ಕ ಗ್ರಾಮದ ಪಯಂದೂರು ನಿವಾಸಿ ಜಗದೀಶ್(26.ವ) ಎಂದು ಗುರುತಿಸಲಾಗಿದೆ. ಕಾರು ಚಾಲಕ ಸಚಿನ್ ಎಂಬವರು ಅಪಾಯದಿಂದ ಪಾರಾಗಿದ್ದಾರೆ.

ತಂದೆ ರಾಮಣ್ಣ ಪೂಜಾರಿ, ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ. ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗದ ಸಕ್ರೀಯ ಕಾರ್ಯಕರ್ತರಾಗಿದ್ಜರು. ವೃತ್ತಿಯಲ್ಲಿ ಪೈಂಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Leave a Reply

You May Have Missed

error: Content is protected !!