ನೆಲ್ಯಾಡಿ:ವಾರ್ಷಿಕ ಸ್ನೇಹ ಸಮ್ಮಿಲನ-2022 ಮತ್ತು ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಅಭಿನಂದನಾ ಕಾರ್ಯಕ್ರಮ

ನೆಲ್ಯಾಡಿ:ವಾರ್ಷಿಕ ಸ್ನೇಹ ಸಮ್ಮಿಲನ-2022 ಮತ್ತು ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಅಭಿನಂದನಾ ಕಾರ್ಯಕ್ರಮ

ನೇಸರ ಮಾ.01:ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಮಾರ್ಚ್ 2ರಂದು ಬುಧವಾರ ಮಧ್ಯಾಹ್ನ ಗಂಟೆ 2.00ಕ್ಕೆ ವಾರ್ಷಿಕ ಸ್ನೇಹ ಸಮ್ಮಿಲನ-2022 ಮತ್ತು ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಅಭಿನಂದನಾ ಕಾರ್ಯಕ್ರಮ.
ಅತಿವಂದನೀಯ ಬಿಷಪ್ ಮಾರ್ಕೋಸ್ ಮೋರ್ ಕ್ರಿಸೋಸ್ಟಮಸ್ ಅಧ್ಯಕ್ಷರು ಆಡಳಿತ ಮಂಡಳಿ ಸಂತ ಜಾರ್ಜ್ ವಿದ್ಯಾಸಂಸ್ಥೆಗಳು ಇವರು ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೆ|ರೆ|ಜಾನ್ ವರ್ಗೀಸ್ ಕೋರ್ ಎಪಿಸ್ಕೋಪ ಉಪಾಧ್ಯಕ್ಷರು ಆಡಳಿತ ಮಂಡಳಿ ಇವರು ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಲೋಕೇಶ ಕೆ.ಇ.ಎಸ್,ಕೇತ್ರ ಶಿಕ್ಷಣಾಧಿಕಾರಿಗಳು ಪುತ್ತೂರು,ಚಂದ್ರಶೇಖರ ಪೆರಾರ್ ಕೆ.ಇ.ಎಸ್, ನಿವೃತ್ತ ಮುಖ್ಯ ಗುರುಗಳು ಮತ್ತು ಅಧ್ಯಕ್ಷರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸುಳ್ಯ, ಅತಿಥಿಗಳಾಗಿ ಶ್ರೀಮತಿ ಚೇತನಾ ಅಧ್ಯಕ್ಷರು ಗ್ರಾಮ ಪಂಚಾಯತ್ ನೆಲ್ಯಾಡಿ,ಎನ್. ಇಸ್ಮಾಯಿಲ್ ಅಧ್ಯಕ್ಷರು ಪೂರ್ವ ವಿದ್ಯಾರ್ಥಿ ಸಂಘ ಹಾಗೂ ಅಭಿನಂದನೆ ಸ್ವೀಕರಿಸಲಿರುವ ಪದ್ಮಶ್ರೀ ಹರೇಕಳ ಹಾಜಬ್ಬ ಪದ್ಮಶ್ರೀ ಪುರಸ್ಕೃತರು-2021 ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅಬ್ರಹಾಂ ವರ್ಗೀಸ್, ಸಂಚಾಲಕರು ಸಂತ ಚಾರ್ಜ್ ವಿದ್ಯಾಸಂಸ್ಥೆಗಳು ನೆಲ್ಯಾಡಿ ತಿಳಿಸಿದರು.

 

—ಜಾಹೀರಾತು—

 

Leave a Reply

You May Have Missed

error: Content is protected !!