ಬೆಳ್ತಂಗಡಿ ಮಾರುಕಟ್ಟೆಯಲ್ಲಿ ಹುಡುಗರ ಪುಂಡಾಟಿಕೆ; ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ ಮಾರುಕಟ್ಟೆಯಲ್ಲಿ ಹುಡುಗರ ಪುಂಡಾಟಿಕೆ; ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನರ ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ ಹಿಡಿದು ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಮಾಜಿಕಜಾಲತಾಣದಲ್ಲಿ ಹಾಕಿದ್ದು. ಬಳಿಕ ಆತ ವಿಡಿಯೋದಿಂದ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾ‌ನೆ.

ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಎಂಬ ಯುವಕ ಈವಾಗಿನ ನವೀನ ಮಾದರಿಯ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದು. ಮಾರುಕಟ್ಟೆಯಲ್ಲಿದ್ದ ಪಡ್ಡೆ ಯುವಕರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜೊತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಪ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್(ಜೈಭಾರತ್) , ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ.

ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಯುವಕ ಶಾಹಿಲ್ ನ.21 ರಂದು ಸಂಜೆ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು. ತಕ್ಷಣ ಚಿಕಿತ್ಸೆಗಾಗಿ ಮನೆಯವರು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ.

Leave a Reply

You May Have Missed

error: Content is protected !!