ಕಡಬ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಕಾರೊಂದು ಡಿಕ್ಕಿ; ಘಟನೆ ವಿಡಿಯೊ ಸಿಸಿ ಕ್ಯಾಮರದಲ್ಲಿ ಸೆರೆ

ಕಡಬ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಕಾರೊಂದು ಡಿಕ್ಕಿ; ಘಟನೆ ವಿಡಿಯೊ ಸಿಸಿ ಕ್ಯಾಮರದಲ್ಲಿ ಸೆರೆ

ಕಡಬ: ಉಪ್ಪಿನಂಗಡಿ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ದೇರಾಜೆ ಕ್ರಾಸ್ ಎಂಬಲ್ಲಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಕಾರೊಂದು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ವಿದ್ಯಾರ್ಥಿನಿ ತನ್ನ ಪೋಷಕರೊಂದಿಗೆ ಬೈಕ್ ನಲ್ಲಿ ಬಂದು ಇಳಿದು ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಉಪ್ಪಿನಂಗಡಿಯತ್ತ ತೆರಳುವ ಬಸ್ಸು ಗಾಗಿ ತರಾತುರಿಯಲ್ಲಿ ರಸ್ತೆ ದಾಟುತ್ತಿದ್ದಾಗ ಕಡಬ ಕಡೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ಪುತ್ತೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ಯಿದಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ. ಘಟನೆ ವಿಡಿಯೊ ಪಕ್ಕದ ಅಂಗಡಿಯೊಂದರ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

Previous post

ಬೆಳ್ತಂಗಡಿ ಮಾರುಕಟ್ಟೆಯಲ್ಲಿ ಹುಡುಗರ ಪುಂಡಾಟಿಕೆ; ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲು

Next post

ನೆಲ್ಯಾಡಿ ಗ್ರಾ.ಪಂ.ಹಸಿಮೀನು ಮಾರಾಟದ ಹಕ್ಕು ರೂ.2.59 ಲಕ್ಷಕ್ಕೆ, ವಾರದ ಸಂತೆಯಲ್ಲಿ ಶುಲ್ಕ ವಸೂಲಿ ಹಕ್ಕು ರೂ.1.30 ಲಕ್ಷಕ್ಕೆ ಖಾಯಂ

Leave a Reply

You May Have Missed

error: Content is protected !!