ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಉಪ್ಪಿನಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಉಪ್ಪಿನಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ : ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ 2024‌ನೇ ಸಾಲಿನ ಪೊಲೀಸ್ ಕರ್ತವ್ಯ ಕೂಟದಲ್ಲಿ ಪಶ್ಚಿಮ ವಲಯ ಚಾಂಪಿಯನ್ ಪಟ್ಟ ಅಲಂಕರಿಸಿರುತ್ತದೆ. ಮಿನಲ್ ಲಾ ಮತ್ತು ಪಿಂಗರ್ ಪ್ರಿಂಟ್ ವಿಭಾಗದಲ್ಲಿ ಪಶ್ಚಿಮ ವಲಯದ ಉಪ್ಪಿನಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್ ಅವರು ಪ್ರಥಮ ಸ್ಥಾನವನ್ನು ಪಡೆದು ಜಾರ್ಖಂಡ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಪೊಲೀಸ್ ಕರ್ತವ್ಯ ಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಹಿಂದೆ ರವಿ ಬಿ.ಎಸ್ ಅವರು ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿ ಪದಕವನ್ನು ಪಡೆದಿದ್ದಾರೆ. ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಗೆ ಕೀರ್ತಿ ತಂದಿರುತ್ತಾರೆ. ದಕ್ಷ ಪೊಲೀಸ್ ಅಧಿಕಾರಿಯಾಗಿರುವ ಇವರು ಪ್ರಸ್ತುತ ಉಪ್ಪಿನಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Leave a Reply

You May Have Missed

error: Content is protected !!