ಕಡಬ ಸೈಂಟ್ ಆನ್ಸ್ ಕಿಂಡರ್ ಗಾರ್ಡನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಕಡಬ ಸೈಂಟ್ ಆನ್ಸ್ ಕಿಂಡರ್ ಗಾರ್ಡನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಕಡಬ : ಸೈಂಟ್ ಆನ್ಸ್ ಕಿಂಡರ್ ಗಾರ್ಡನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಜರಗಿತು.

ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐತ್ತೂರಿನ ಸಹಶಿಕ್ಷಕಿ ಸುಂದರಿ. ಎ ಮಾತನಾಡಿ ನಮ್ಮ ಜೀವನಕ್ಕೆ ಶಿಕ್ಷಣದ ಜತೆಗೆ ಕ್ರೀಡೆ ಕೂಡ ಬಹಳ ಮುಖ್ಯ ಎಂದರು.

ಸಂಸ್ಥೆಯ ಸಂಚಾಲಕ ವಂ. ಪ್ರಕಾಶ್ ಪೌಲ್ ಡಿಸೋಜ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ರೀಡೆಗಳು ನಮ್ಮನ್ನು ಆರೋಗ್ಯಕರವಾಗಿರಿಸುತ್ತವೆ ಮತ್ತು ದೇಹವನ್ನು ಸದೃಢವಾಗಿ ಕ್ರೀಯಾಶೀಲವಾಗಿರಿಸುತ್ತದೆ ಎಂದರು.

ಅನೀನಾ ಪ್ರತಿಜ್ಞಾವಿಧಿ ಬೋಧಿಸಿದರು. ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಜೇಸಿಂತಾ ವೇಗಸ್, ಸೈಂಟ್ ಆನ್ಸ್ ರಕ್ಷಕ -ಶಿಕ್ಷಕ ಸಂಘದ ಉಪಾಧ್ಯಕ್ಷ ಗಿರಿಧರ್ ರೈ, ಸೈಂಟ್ ಜೋಕಿಮ್ ಪಿ ಯು ಕಾಲೇಜ್ ಪ್ರಾಂಶುಪಾಲ ಕಿರಣ್ ಕುಮಾರ್, ಸೈಂಟ್ ಜೋಕಿಮ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ದಾ ರೋಡ್ರಿಗಸ್, ಸೈಂಟ್ ಆನ್ಸ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ದಕ್ಷಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಹ ಶಿಕ್ಷಕಿ ಸುರಕ್ಷಾ ಸ್ವಾಗತಿಸಿ, ಸುನೀತಾ ವಂದಿಸಿದರು. ಅನುಷಾ ಕಾರ್ಯಕ್ರಮ ನಿರೂಪಿಸಿದರು.

ಸ್ವರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ವಿಜಯ ವೇದಿಕೆಯಲ್ಲಿ ಗೌರವಿಸಲಾಯಿತು.

 

 

Leave a Reply

You May Have Missed

error: Content is protected !!