ನಿಷೇಧಿತ ಎಂಡಿಎಂಎ ಮಾರಾಟ: ಮೂವರ ಬಂಧನ

ನಿಷೇಧಿತ ಎಂಡಿಎಂಎ ಮಾರಾಟ: ಮೂವರ ಬಂಧನ

ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಣಾಜೆ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ಪೊಲೀಸರು ಬಂಧಿಸಿ, ₹1.50 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.

ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್ (22), ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್ (27), ತೊಕ್ಕೊಟ್ಟು ಗಣೇಶ ನಗರದ, ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್ (28) ಬಂಧಿತ ಆರೋಪಿಗಳು.

ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರುವಿನ ಕೈಗಾರಿಕಾ ನಿರ್ಜನ ಪ್ರದೇಶದಲ್ಲಿ ಸೋಮವಾರ ಆರೋಪಿಗಳು ಕಾರಿನಲ್ಲಿ ಎಂಡಿಎ ಪದಾರ್ಥ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Leave a Reply

You May Have Missed

error: Content is protected !!