ಬೆಳ್ತಂಗಡಿ : ಸ್ನಾನ ಮಾಡಲು ಹೋದ ಮೂವರು ಯುವಕರು ನೀರುಪಾಲು

ಬೆಳ್ತಂಗಡಿ : ಸ್ನಾನ ಮಾಡಲು ಹೋದ ಮೂವರು ಯುವಕರು ನೀರುಪಾಲು

ಬೆಳ್ತಂಗಡಿ : ಕಾರ್ಯಕ್ರಮ ನಿಮ್ಮಿತ ಬಂದ ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆ ಹೋದ ಮೂವರು ಯುವಕರು ನೀರುಪಾಲದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮ್ಮಿತ ಬಂದು ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್(20), ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್(19), ಬಂಟ್ವಾಳ ಗ್ರಾಮದ ವಗ್ಗದ ಜೈಸನ್(19) ಎಂಬವರು ನ.27 ರಂದು ಊಟ ಮುಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಸ್ನಾನ ಮಾಡಲು ಹೋಗಿದ್ದು ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೂವರು ಮೃತದೇಹ ನೀರಿನಿಂದ ಹೊರತೆಗೆಯಲಾಗಿದ್ದು.

ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

You May Have Missed

error: Content is protected !!