ಶಿಶಿಲ: ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಶಿಶಿಲ: ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಕೊಕ್ಕಡ: ಕನ್ಯಾಡಿ ಸೇವಾಭಾರತಿ(ರಿ.) ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ ಶಿಶಿಲ ಮತ್ತು ಶಿಶಿಲ ಗ್ರಾ.ಪಂ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 29ನೇ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಡಿ.28 ರಂದು ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ಕಟ್ಟಡ ವೈಕುಂಠಪುರದಲ್ಲಿ ನಡೆಯಿತು.

ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಇದರ ಅಧ್ಯಕ್ಷರಾದ ಶ್ರೀಮತಿ ಶಾಂತ.ಪಿ ಶೆಟ್ಟಿ ಶಿಶಿಲ ಜನರಿಗೆ ಸ್ವ ಉದ್ಯೋಗ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟರುವುದು ಬಹಳ ಸಂತೋಷದ ವಿಷಯ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಶ್ರೀಮತಿ ಸ್ವರ್ಣಗೌರಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಯಾರಿಗೂ ಅವಲಂಬಿತವಾಗದೆ ಸ್ವಾವಲಂಬಿ ಜೀವನವನ್ನು ನಡೆಸುವುದು ಅತ್ಯಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ವಿನಯ ಶೆಂಡ್ಯೆ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು.

ನಮ್ಮ ಸಂಸ್ಥೆಯ ಪರವಾಗಿ ಶ್ರೀಮತಿ ವಿನಯ ಶೆಂಡ್ಯೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಶಿಶಿಲದ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದ ಟ್ರಸ್ಟಿ ಶ್ರೀಮತಿ ಚಂದ್ರಾವತಿ, ಶಿಶಿಲ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರದ ಮಾಜಿ ಅಧ್ಯಕ್ಷರಾದ ಚೆನ್ನಪ್ಪ.ಕೆ.ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 25ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

  •  

Leave a Reply

You May Have Missed

error: Content is protected !!