ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ನೂಜಿಬಾಳ್ತಿಲ ಕಾಲೇಜುನ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವು

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ನೂಜಿಬಾಳ್ತಿಲ ಕಾಲೇಜುನ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವು

ನೇಸರ ಮಾ.03:ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನೂಜಿಬಾಳ್ತಿಲದಿಂದ ವರದಿಯಾಗಿದೆ.
ನೂಜಿಬಾಳ್ತಿಲ ಗ್ರಾಮದ ನಿಡ್ಡೋ ಎಂಬಲ್ಲಿನ ಪದ್ಮನಾಭ ಗೌಡ ಹಾಗೂ ಯಶೋದಾ ಎಂಬವರ ಪುತ್ರ ಧನುಷ್ ಮೃತಪಟ್ಟವರು. ಬೆಥನಿ ಪದವಿ ಪೂರ್ವ ಕಾಲೇಜುನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ. ಈತ ಫೆ.25ರ ಶುಕ್ರವಾರದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತ ವಿದ್ಯಾರ್ಥಿಯು ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದು, ಶಿಕ್ಷಕರು, ಶಾಲಾ ಆಡಳಿತ ವರ್ಗ ಹಾಗೂ ಶಾಲಾ ವಿದ್ಯಾರ್ಥಿಗಳು, ಧನುಷ್ ನಿಧನಕ್ಕೆ ವಿಷಾದ ವ್ಯಕ್ತಪಡಿಸಿ ಸಂತಾಪ ಸೂಚಿಸಿದ್ದಾರೆ.

Leave a Reply

You May Have Missed

error: Content is protected !!