ಪಡುಬೆಟ್ಟು ದೇವಸ್ಥಾನದಲ್ಲಿ ಶೌರ್ಯವಿಪತ್ತು ನಿರ್ವಹಣಾ ಸ್ವಯಂಸೇವಕರಿಂದ ಶ್ರಮದಾನ

ಪಡುಬೆಟ್ಟು ದೇವಸ್ಥಾನದಲ್ಲಿ ಶೌರ್ಯವಿಪತ್ತು ನಿರ್ವಹಣಾ ಸ್ವಯಂಸೇವಕರಿಂದ ಶ್ರಮದಾನ

ನೆಲ್ಯಾಡಿ: ಕಡಬ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ), ನೆಲ್ಯಾಡಿ ವಲಯ ಶೌರ್ಯವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಫೆ.22 ರಂದು ನೆಲ್ಯಾಡಿ ಗ್ರಾಮದ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಾಸ್ಥಾನದ ಆವರಣದ ಸುತ್ತಮುತ್ತ ಇರುವ ಅಪಾಯಕಾರಿ ಮರಗಳ ತೆರವುಗೊಳಿಸುವ ಕಾರ್ಯದಲ್ಲಿ ಭಾಗವಹಿಸಿದ್ದರು.

ಶ್ರಮದಾನದ ನಂತರ ಮಾಸಿಕ ಸಭೆಯನ್ನು ನೆಲ್ಯಾಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪ್ರತಿನಿಧಿ ರಮೇಶ್ ಬಾಣಜಾಲು ಅವರ ಅಧ್ಯಕ್ಷತೆಯಲ್ಲಿ, ವಲಯ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಮೇಲ್ವಿಚಾರಕರಾದ ಆನಂದ.ಡಿ.ಬಿ ಅವರು ಶೌರ್ಯ ಸ್ವಯಂ ಸೇವಕರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ವೇದಿಕೆಯಲ್ಲಿ ದೇವಸ್ಥಾನದ ಆಡಳಿತ ಮುಕ್ತೇಸರ ಡಾ.ಸುಬ್ರಹ್ಮಣ್ಯ ಶಬರಾಯ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸತೀಶ್.ಕೆ.ಎಸ್, ಕಾರ್ಯದರ್ಶಿ ಕಾಂತಪ್ಪ ಗೌಡ ಪೂವಾಜೆ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು. ಶೌರ್ಯ ಘಟಕ ಸಂಯೋಜಕಿ ನಮಿತಾ ಎಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಶೌರ್ಯ ಸ್ವಯಂ ಸೇವಕರಾದ ಕುಸುಮ.ಕೆ ವಂದಿಸಿದರು.

  •  

Leave a Reply

You May Have Missed

error: Content is protected !!