ಮುಂಡಾಜೆ: ನಿವೃತ್ತ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

ಮುಂಡಾಜೆ: ನಿವೃತ್ತ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ 1991ರಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸೇವೆಗೆ ಸೇರಿದ ಶ್ರೀಮತಿ ಜಾಲಿ.ಓ.ಎ ಅವರು 2004ರಿಂದ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿ, ಸುಮಾರು 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಫೆ.28ರಂದು ವಯೋ ನಿವೃತ್ತಿ ಹೊಂದಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಕಾರ್ಯದರ್ಶಿಯವರಾದ ಕೃಷ್ಣ ಭಟ್ ರವರು ನಿವೃತ್ತರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು. ಖಜಾಂಚಿಯವರಾದ ಅಚ್ಯುತ ನಾಯಕ್, ಶತಾಬ್ದಿ ವಿದ್ಯಾಲಯ ಸಮಿತಿ ಮುಂಡಾಜೆಯ ಸಂಚಾಲಕರಾದ ನಾರಾಯಣ ಫಡ್ಕೆ, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯ ಅಧ್ಯಕ್ಷರಾದ ವಿನಯಚಂದ್ರ, ಸದಸ್ಯರಾದ ವಿಶ್ವನಾಥ ಶೆಟ್ಟಿ, ಶ್ರೀಮತಿ ಭಾರತಿ ಫಡ್ಕೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ಸಹ ಪ್ರಾಧ್ಯಾಪಕರಾದ ಡಾ.ರವಿ.ಎಂ.ಎನ್ ರವರು ಉಪಸ್ಥಿತರಿದ್ದರು.

  •  
Previous post

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರತಿಜ್ಞಾವಿಧಿ ಸ್ವೀಕಾರ

Next post

ಪದ್ಮುಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ.ಪಿ ಪಾಂಜಾಳ ಅವಿರೋಧ ಆಯ್ಕೆ

Leave a Reply

You May Have Missed

error: Content is protected !!