ಕಡಬ: ಮನೆಗೆ ನುಗ್ಗಿ ಲಕ್ಷಾಂತರ ರೂ. ನಗ-ನಗದು ದೋಚಿದ ಕಳ್ಳರು

ಕಡಬ: ಮನೆಗೆ ನುಗ್ಗಿ ಲಕ್ಷಾಂತರ ರೂ. ನಗ-ನಗದು ದೋಚಿದ ಕಳ್ಳರು

ನೇಸರ ಮಾ.04: ಕಡಬ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ಮತ್ತು ನಗದು ದೋಚಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.
ಗಂಡಿಬಾಗಿಲು ಮಸೀದಿ ಬಳಿ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಕಪಾಟಿನಲ್ಲಿ ಇದ್ದ 14 ಪವನ್ ಚಿನ್ನಾಭರಣ ಮತ್ತು 42 ಸಾವಿರ ನಗದು ದೋಚಿದ್ದಾರೆ.ಗುರುವಾರ ರಾತ್ರಿ ಆತೂರು ಮಸೀದಿಯಲ್ಲಿ ದಿಕ್ರ್ ಹಲ್ಕಾ ಕಾರ್ಯಕ್ರಮ ಇದ್ದುದರಿಂದ ಮನೆಯವರು ಸಂಜೆ 7 ಗಂಟೆಯ ಹೊತ್ತಿಗೆ ಮನೆಗೆ ಬೀಗ ಹಾಕಿ ಹೋಗಿದ್ದು, ಕಾರ್ಯಕ್ರಮ ಮುಗಿದ ಬಳಿಕ ರಾತ್ರಿ 11 ಗಂಟೆಯ ಹೊತ್ತಿಗೆ ಮರಳಿ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಾನಾ ಟಿ. ಕುಮಾರ್, ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!