ಬನ್ನೆಂಗಳ ಪಿಲಿಗೂಡು ಬಾರ್ಯ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2ಲಕ್ಷ ದೇಣಿಗೆ ಹಸ್ತಾಂತರ

ಬನ್ನೆಂಗಳ ಪಿಲಿಗೂಡು ಬಾರ್ಯ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2ಲಕ್ಷ ದೇಣಿಗೆ ಹಸ್ತಾಂತರ

ಪಿಲಿಗೂಡು ಬಾರ್ಯಾ ಬನ್ನೆಂಗಳದಲ್ಲಿ ನೂತನವಾಗಿ ರಚನೆಯಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಕೊಡ ಮಾಡಿದ 2ಲಕ್ಷ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಾಬಲ ಕುಲಾಲ್ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು

ತಾಲೂಕು ಜನಜಾಗೃತಿ ಕಾರ್ಯಕಾರಿಣಿ ಸಮಿತಿ ಸದಸ್ಯರೂ ಹಾಗೂ ಬನ್ನೆಂಗಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಗುಣಕರ್ ಅಗ್ನಾಡಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಬಾರ್ಯ ಗುರುವಾಯನೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ, ಸೇವಾಪ್ರತಿನಿಧಿ ವಿಶಾಲಾಕ್ಷಿ ಒಕ್ಕೂಟದ ಅಧ್ಯಕ್ಷರಾದ ಮೋಹನ್ ಗೌಡ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

  •  

Leave a Reply

You May Have Missed

error: Content is protected !!