ನೆಲ್ಯಾಡಿ: ಪೆರಿಯಶಾಂತಿಯಲ್ಲಿ ಕಾರು-ಆಟೋ ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ

ನೆಲ್ಯಾಡಿ: ಪೆರಿಯಶಾಂತಿಯಲ್ಲಿ ಕಾರು-ಆಟೋ ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ

ನೆಲ್ಯಾಡಿ: ಪೆರಿಯಶಾಂತಿಯಲ್ಲಿ ಕಾರು-ಆಟೋ ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯ ಸಮೀಪ ವಾಲ್ತಾಜೆ ಸೇತುವೆ ಬಳಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಮೃತರನ್ನು ಅಡ್ಡಹೊಳೆ ಸಮೀಪದ ಪೇರಮಜಲು ನಿವಾಸಿ ಪ್ರಭಾಕರ(40 ವ.) ಎಂದು ಗುರುತಿಸಲಾಗಿದೆ.

ನೆಲ್ಯಾಡಿಯಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದ ಆಟೋಕ್ಕೆ, ಬೆಂಗಳೂರಿನಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ಕಾರು ಡಿಕ್ಕಿಯಾದ ಪರಿಣಾಮ ಆಟೋ ಚಾಲಕ ರಸ್ತೆ ಮೇಲೆಯೇ ಎಸೆಯಲ್ಪಟ್ಟಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಪತ್ನಿ, ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

  •  

Leave a Reply

You May Have Missed

error: Content is protected !!