ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಭೇಟಿ

Sowthadka

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಭೇಟಿ

ಕೊಕ್ಕಡ: ಬಯಲು ಆಲಯ ಮಹಿಮೆ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ನಯನ ಮೋಟಮ್ಮ ಮಂಗಳವಾರದಂದು ಭೇಟಿ ನೀಡಿ, ಶ್ರೀ ಮಹಾಗಣಪತಿಗೆ ಭಕ್ತಿಭಾವದಿಂದ ರಂಗಪೂಜೆ ಸಲ್ಲಿಸಿದರು.

ಶಾಸಕಿಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ವತಿಯಿಂದ ಸತ್ಕರಿಸಿ ಗೌರವ ಸಲ್ಲಿಸಿದರು. ಈ ವೇಳೆ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ, ಸದಸ್ಯರಾದ ಪ್ರಶಾಂತ್ ಮಚ್ಚಿನ, ವಿಶ್ವನಾಥ್ ಪೂಜಾರಿ ಕೊಲ್ಲಾಜೆ, ಪ್ರಮೋದ್ ಕುಮಾರ್ ರೈ, ಹರಿಶ್ಚಂದ್ರ ಕೊಕ್ಕಡ, ಗಣೇಶ್ ಕಾಶಿ ಕೊಕ್ಕಡ ಉಪಸ್ಥಿತರಿದ್ದರು.

  •  

Leave a Reply

You May Have Missed

error: Content is protected !!