ಮಂಗಳೂರು ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್ ವಾಲ್ ಮತ್ತು ದಕ್ಷಿಣ ಕನ್ನಡ ಎಸ್ಪಿ ಯತೀಶ್ ಎನ್ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್ ವಾಲ್ ಮತ್ತು ದಕ್ಷಿಣ ಕನ್ನಡ ಎಸ್ಪಿ ಯತೀಶ್ ಎನ್ ವರ್ಗಾವಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಗುರುವಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಮಂಗಳೂರು ಪೊಲೀಸ್ ಕಮಿಷನ‌ರ್ ಅನುಪಮ್ ಅಗ‌ರ್ ವಾಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇನ್ನು ನೂತನ ಮಂಗಳೂರು ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಉಡುಪಿಯ ಎಸ್ಪಿಯಾಗಿದ್ದ ಡಾ.ಅರುಣ್ ಕೆ ಅವರನ್ನು ನೇಮಕ ಮಾಡಲಾಗಿದೆ. ಉಡುಪಿ ಎಸ್ಪಿಯಾಗಿ ಹರಿರಾಂ ಶಂಕರ್ ಅವರನ್ನು ನೇಮಕ ಮಾಡಲಾಗಿದೆ.

  •  

Leave a Reply

You May Have Missed

error: Content is protected !!