ವಿಟ್ಲ: ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ : ಓರ್ವ ಮೃತ್ಯು – ಸಹಸವಾರನಿಗೆ ಗಂಭೀರ ಗಾಯ

ವಿಟ್ಲ

ವಿಟ್ಲ: ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ : ಓರ್ವ ಮೃತ್ಯು – ಸಹಸವಾರನಿಗೆ ಗಂಭೀರ ಗಾಯ

ವಿಟ್ಲ: ರಸ್ತೆಯಲ್ಲಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಯೊಂದರ ಹಿಂಬಾಗಕ್ಕೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಸವಾರರಿಬ್ಬರ ಪೈಕಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಮೇ.3೦ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಪದವು ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕು ಒಕ್ಕೆತ್ತೂರು ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇರ್ಫಾನ್ (19ವ.) ಮೃತ ದುರ್ದೈವಿ. ಸಹಸವಾರ ಒಕ್ಕೆತ್ತೂರು ನಿವಾಸಿ ಪುತ್ತು ಎಂಬವರ ಪುತ್ರ ಫಾರೀಸ್ ಗಂಭೀರ ಗಾಯಗೊಂಡವರಾಗಿದ್ದಾರೆ.

ಕನ್ಯಾನ ಕಡೆಯಿಂದ ಬಾಕ್ಸೆಟ್ ಮಣ್ಣು ಸಾಗಾಟದ ಲಾರಿಯನ್ನು ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ನಿಲ್ಲಿಸಿದ್ದರು. ಈ ವೇಳೆ ಆ ದಾರಿಯಾಗಿ ಬಂದ ಇರ್ಫಾನ್ ಹಾಗೂ ಫಾರೀಸ್ ರವರು ಸಂಚರಿಸುತ್ತಿದ್ದ ಬೈಕ್ ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾಗಿದೆ.

ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಇಬ್ಬರು ಬೈಕ್ ಸವಾರರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಇರ್ಫಾನ್(19) ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಲಾರಿ ಚಾಲಕ ಬೇಜಾಬ್ದಾರಿತನದಿಂದ ರಸ್ತೆಯಲ್ಲಿಯೇ ಲಾರಿಯನ್ನು ನಿಲ್ಲಿಸಿ ಚಾ ಕುಡಿಯಲು ಹೋಗಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

  •  

Leave a Reply

You May Have Missed

error: Content is protected !!