ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಡಾ.ಅರುಣ್ ಕೆ ಅಧಿಕಾರ ಸ್ವೀಕಾರ

Mangalore

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಡಾ.ಅರುಣ್ ಕೆ ಅಧಿಕಾರ ಸ್ವೀಕಾರ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಡಾ.ಅರುಣ್. ಕೆ, ಐಪಿಎಸ್ ಇಂದು (ಮೇ.30) ಅಧಿಕಾರ ಸ್ವೀಕರಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡುವುದು ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್‌ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ ಗಳ ಚನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ 9480805301 ಅಥವಾ ಕಛೇರಿಗೆ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  •  

Leave a Reply

You May Have Missed

error: Content is protected !!