ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಕಳ್ಳರ ಹಾವಳಿ

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಕಳ್ಳರ ಹಾವಳಿ

ನೇಸರ ಮಾ.8: ಉಪ್ಪಿನಂಗಡಿ ಬಸ್ ನಿಲ್ದಾಣದ ಪರಿಸರದಲ್ಲಿ ಕಳ್ಳರ ಹಾವಳಿ ಮಿತಿ ಮೀರಿದ್ದು, ಮಹಿಳೆಯೋರ್ವರ ಕತ್ತಿನಿಂದ ಐದೂವರೆ ಪವನ್ ತೂಕದ ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ, ಬಸ್ಸಿನಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿನಿಯರ ಸಹಿತ ಒಟ್ಟು ನಾಲ್ಕು ಮಂದಿಯ ಮೊಬೈಲ್ ಕಳವು ಮಾಡಲಾದ ಘಟನೆ ಬಗ್ಗೆ ವರದಿಯಾಗಿದೆ.
ತಣ್ಣೀರುಪಂತ ಗ್ರಾಮದ ಅಳಕೆ ಮನೆ ನಿವಾಸಿ ಕೆ.ಖಾಲಿದ್ ಎಂಬವರ ಪತ್ನಿ ಝರಿನಾ ಎಂಬವರು ತನ್ನ ಇಬ್ಬರು ಮಕ್ಕಳೊಂದಿಗೆ ಕಲ್ಲೇರಿಯಿಂದ ಉಪ್ಪಿನಂಗಡಿಗೆ ಬಸ್‌ನಲ್ಲಿ ಬಂದು ಇಳಿಯುತ್ತಿದ್ದಂತೆ ಆಕೆಯ ಕತ್ತಿನಲ್ಲಿದ್ದ ಐದೂವರೆ ಪವನ್ ತೂಕದ ಚಿನ್ನದ ನೆಕ್ಲೆಸ್ ಕಣ್ಮರೆಯಾಗಿದೆ. ಬಸ್ ನಿಲ್ದಾಣದಲ್ಲಿ ಜನದಟ್ಟನೆಯ ಲಾಭ ಪಡೆದ ಕಳ್ಳರು ನೆಕ್ಲೆಸ್‌ನ್ನು ಲಪಟಾಯಿಸಿರುವ ಸಾಧ್ಯತೆ ವ್ಯಕ್ತವಾಗಿದ್ದು. ಈ ಬಗ್ಗೆ ಝರಿನಾ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದೇ ವೇಳೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ರಕ್ಷ, ಗೌರಿ, ವಂಶಿನಿ ಎಂಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಬೆಲೆ ಬಾಳುವ ಮೊಬೈಲ್‌ಗಳನ್ನು ಹಾಗೂ ರಂಜಿತ್ ರ ಅಂಗಡಿಯಿಂದ ಒಂದು ಮೊಬೈಲ್ ಪೋನ್ ಕಳ್ಳರು ಕದ್ದೊಯ್ದಿರುವುದಾಗಿಯೂ ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

Leave a Reply

You May Have Missed

error: Content is protected !!