ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ತನಿಖೆ NIA ಹೆಗಲಿಗೆ

Mangaluru

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ತನಿಖೆ NIA ಹೆಗಲಿಗೆ

ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಬಿಜೆಪಿ ನಾಯಕರು ಸೇರಿದಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ (NIA) ಕ್ಕೆ ವಹಿಸಿ ಆದೇಶ ಹೊರಡಿಸಿದೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾ‌ನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು. ಅಲ್ಲದೆ, ಪ್ರಕರಣದ ತನಿಖೆಯನ್ನು NIA ಗೆ ನೀಡುವಂತೆ ಸುಹಾಸ್ ಶೆಟ್ಡಿ ಪೋಷಕರು‌ ಸರ್ಕಾರಕ್ಕೆ ಒತ್ತಾಯಿಸಿದ್ದರು.

  •  

Leave a Reply

You May Have Missed

error: Content is protected !!