ಕೌಕ್ರಾಡಿ ಗ್ರಾ.ಪಂ ನಲ್ಲಿ ವಿಶ್ವ ಮಹಿಳಾ ದಿನಾಚರಣೆ

ಕೌಕ್ರಾಡಿ ಗ್ರಾ.ಪಂ ನಲ್ಲಿ ವಿಶ್ವ ಮಹಿಳಾ ದಿನಾಚರಣೆ

ನೇಸರ ಮಾ.8: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ನಲ್ಲಿ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ಹಾಗೂ ನರೇಗಾ ಮಹಿಳಾ ಫಲಾನುಭವಿಗಳಿಗೆ ಲಿಂಬೆ ಚಮಚ ಓಟ, ಸೂಜಿಗೆ ದಾರ ಹಾಕುವುದು, ನೆಲದಿಂದ ಹೆಸರು ಕಾಳು ಹೆಕ್ಕುವುದು, ಸಂಗೀತ ಸ್ಪರ್ಧೆ ಹೀಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು ಹಾಗೂ ಇದೇ ಸಂದರ್ಭದಲ್ಲಿ ಸಾಧಕ ಮಹಿಳೆ ಹಯರಿ ರವರನ್ನು ಗುರುತಿಸಿ ಸ್ಮರಣಿಕೆಯನ್ನು ನೀಡಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಎನ್ ಆರ್ ಎಲ್ ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ನರೇಗಾ ಫಲಾನುಭವಿಗಳು, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವೀಕ್ಷಿಸಿ Subscribers ಮಾಡಿ

Leave a Reply

You May Have Missed

error: Content is protected !!