ಇಚ್ಲಂಪಾಡಿ: ನೀರಿನಲ್ಲಿ ಮುಳುಗಿ ಮೃತಪಟ್ಟ ಯುವಕನ ಮನೆಗೆ ಸುಳ್ಯ ಶಾಸಕಿ ಭೇಟಿ

ಇಚ್ಲಂಪಾಡಿ: ನೀರಿನಲ್ಲಿ ಮುಳುಗಿ ಮೃತಪಟ್ಟ ಯುವಕನ ಮನೆಗೆ ಸುಳ್ಯ ಶಾಸಕಿ ಭೇಟಿ

ಇಚ್ಲಂಪಾಡಿ ಗ್ರಾಮದ ಕೆಡೆಂಬೇಲು ನಿವಾಸಿ ಜಯಾನಂದ ಶೆಟ್ಟಿ ಅವರ ಮಗ ಚೇತನ್ ಶೆಟ್ಟಿ (21) ಎಂಬವರು ಭಾನುವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಮೃತಪಟ್ಟ ಯುವಕನ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿ, ಸರಕಾರದಿಂದ ಸಹಾಯ ದೊರಕಿಸಿ ಕೊಡುವ ಬಗ್ಗೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಸಂದರ್ಭದಲ್ಲಿ ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ, ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿ, ಇಚ್ಲಂಪಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ದಿವ್ಯೇಶ್ ಕಲ್ಯ ಮೊದಲಾದವರು ಉಪಸ್ಥಿತರಿದ್ದರು.

  •  

Leave a Reply

You May Have Missed

error: Content is protected !!