ಪುತ್ತೂರು ಟ್ರಾಫಿಕ್ ಠಾಣೆಯ ಹೆಡ್‌ಕಾನ್ಸ್ಟೇಬಲ್, ಗೂನಡ್ಕದ ಶಿವಪ್ರಸಾದ್ ನಿಧನ

Puttur

ಪುತ್ತೂರು ಟ್ರಾಫಿಕ್ ಠಾಣೆಯ ಹೆಡ್‌ಕಾನ್ಸ್ಟೇಬಲ್, ಗೂನಡ್ಕದ ಶಿವಪ್ರಸಾದ್ ನಿಧನ

ಪುತ್ತೂರು ಸಂಚಾರ ಪೊಲೀಸ್ ಠಾಣೆ ಹೆಡ್‌ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೂನಡ್ಕ ನಿವಾಸಿ ಶಿವ ಪ್ರಸಾದ್(51)ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು.

ಇವರು ಕಡಬ, ಮಂಗಳೂರು ಹಾಗೂ ಇನ್ನಿತರ ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಮುಂದಿನ ವರ್ಷದಲ್ಲಿ ಟ್ರಾಫಿಕ್ ವಿಭಾಗದಲ್ಲಿ ಎ ಎಸ್ ಐ ಭಡ್ತಿ ಹೊಂದಲಿದ್ದರು ಎಂದು ತಿಳಿದುಬಂದಿದೆ.

ಮೃತರು ಪತ್ನಿ ಸುಲೋಚನಾ, ಪುತ್ರಿಯರಾದ ರಮ್ಯಾ, ಅರ್ಚನಾ , ಪುತ್ರ ತೇಜಸ್ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

  •  

Leave a Reply

You May Have Missed

error: Content is protected !!