ಉಪ್ಪಿನಂಗಡಿ: ನೆಕ್ಕಿಲಾಡಿ ಕುಮಾರಧಾರ ನದಿ ದಡದಲ್ಲಿ ಮೊಸಳೆ ಪತ್ತೆ

ಉಪ್ಪಿನಂಗಡಿ

ಉಪ್ಪಿನಂಗಡಿ: ನೆಕ್ಕಿಲಾಡಿ ಕುಮಾರಧಾರ ನದಿ ದಡದಲ್ಲಿ ಮೊಸಳೆ ಪತ್ತೆ

ಉಪ್ಪಿನಂಗಡಿ: ಮೊಸಳೆಯೊಂದು 34 ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಪತ್ತೆಯಾಗಿದೆ. ಮೊಸಳೆ ನೋಡಲು ಜನ ಆಗಮಿಸುತ್ತಿದ್ದಂತೆ ನದಿಗೆ ಇಳಿದು ಹೋಗಿದೆ.

ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆ ಬಳಿ ಕುಮಾರಧಾರ ನದಿಗಿಳಿಯುವ ದಾರಿಯ ಬಳಿ ನದಿ ದಡದಲ್ಲಿ ಮೊಸಳೆಯು ವಿಶ್ರಾಂತಿ ಪಡೆಯುವುದನ್ನು ಮಕ್ಕಳು ದೂರದಿಂದ ಕಂಡಿದ್ದರು. ನದಿ ದಡದಲ್ಲಿ ಏನೋ ಮಲಗಿದೆ ಎಂದು ಮಕ್ಕಳು ಸ್ಥಳೀಯರಿಗೆ ತಿಳಿಸಿದ್ದರು. ಅದೇನೆಂದು ನೋಡಲು ಹೋದಾಗ ಮೊಸಳೆಯು ನದಿ ದಡದಲ್ಲಿ ವಿಶ್ರಾಂತಿ ಪಡೆಯುವುದು ಕಂಡು ಬಂತು. ಇವರು ಸ್ವಲ್ಪ ಹತ್ತಿರಕ್ಕೆ ಹೋದಾಗ ಮೊಸಳೆ ಆಕ್ರಮಣಕಾರಿಯಂತೆ ಇವರ ಕಡೆ ನೋಡಿದ್ದು, ಮತ್ತೆ ನದಿ ನೀರಿಗೆ ಇಳಿದು ನಾಪತ್ತೆಯಾಗಿದೆ.

  •  

Leave a Reply

You May Have Missed

error: Content is protected !!