ನೆಲ್ಯಾಡಿ: ಪರ್ಕಳ ಸೇತುವೆ ಬಳಿ ಸಂಭವಿಸಿದ ಕಾರು-ಟ್ಯಾಕ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ನಿಧನ

Nellyadi

ನೆಲ್ಯಾಡಿ: ಪರ್ಕಳ ಸೇತುವೆ ಬಳಿ ಸಂಭವಿಸಿದ ಕಾರು-ಟ್ಯಾಕ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ನಿಧನ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ರೆಖ್ಯಾ ಗ್ರಾಮದ ಪರ್ಕಳ ಸೇತುವೆ ಬಳಿ ಕಳೆದ ಮಂಗಳವಾರ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮಹೇಶ್(30) ಶುಕ್ರವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಬೆಂಗಳೂರಿನ ಬೊಮ್ಮನಹಳ್ಳಿ ಬಿಲೇಕಹಳ್ಳಿ ನಿವಾಸಿಯಾದ ಮಹೇಶ್ ಧರ್ಮಸ್ಥಳಕ್ಕೆ ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಾಲ್ವರು ಪ್ರಯಾಣಿಕರಿದ್ದ ಕಾರು ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಚತುಷ್ಪದ ರಸ್ತೆ ಕಾಮಗಾರಿಗೆ ಸಂಬಂಧಪಟ್ಟ ಟ್ಯಾಕ್ಟರ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿತ್ತು.

ಅಪಘಾತದ ಪರಿಣಾಮ ಮಹೇಶ್ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಎಜೆ ಆಸ್ಪತ್ರೆಗೆ ತಕ್ಷಣ ದಾಖಲಿಸಲಾಯಿತು. ಅವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ ಶುಕ್ರವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಅಪಘಾತ ಘಟನೆಯ ಬಗ್ಗೆ ಚಿದಾನಂದ ರೇವಪ್ಪ ಅವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  •  

Leave a Reply

You May Have Missed

error: Content is protected !!