ಹೆಂಡತಿ ಹೆಚ್ಚು ಮೊಬೈಲ್ ಬಳಸ್ತಾಳೆ ಅಂತ ಕಡಿದು ಕೊಂದ ಪತಿ!

Brahmavar

ಹೆಂಡತಿ ಹೆಚ್ಚು ಮೊಬೈಲ್ ಬಳಸ್ತಾಳೆ ಅಂತ ಕಡಿದು ಕೊಂದ ಪತಿ!

ಉಡುಪಿ: ಪತ್ನಿ ಹೆಚ್ಚು ಸಮಯ ಮೊಬೈಲ್ ಬಳಸುತ್ತಾಳೆ ಎಂದು ಪತಿ ಕತ್ತಿಯಿಂದ ಕಡಿದು ಹತ್ಯೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ರೇಖಾ ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿ ಗಣೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಂಡತಿ ಹೆಚ್ಚಿನ ಸಮಯ ಮೊಬೈಲ್ ಬಳಕೆ ಮಾಡುವ ವಿಚಾರಕ್ಕೆ, ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ, ಆರೋಪಿ ಕತ್ತಿಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಇನ್ನೂ ಆರೋಪಿ ವಿಪರೀತ ಮದ್ಯ ವ್ಯಸನಿಯಾಗಿದ್ದ ಎಂದು ತಿಳಿದುಬಂದಿದೆ.

ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಉಡುಪಿ ಎಸ್‍ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಿಳೆಯ ಮೃತದೇಹವನ್ನು ಬ್ರಹ್ಮಾವರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

  •  
Previous post

ಜೂನ್ 22ರಂದು ಶ್ರೀ ಗಡಿಯಾಡಿ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ದೇವಸ್ಥಾನದಲ್ಲಿ ಕುಣಿತ ಭಜನಾ ಸಮಾರೋಪ

Next post

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Leave a Reply

You May Have Missed

error: Content is protected !!