ನೆಲ್ಯಾಡಿ: ಎಸ್ಡಿಪಿಐ 17ನೇ ವರ್ಷದ ಸಂಸ್ಥಾಪನಾ ದಿನಾಚರಣೆ

Nellyadi

ನೆಲ್ಯಾಡಿ: ಎಸ್ಡಿಪಿಐ 17ನೇ ವರ್ಷದ ಸಂಸ್ಥಾಪನಾ ದಿನಾಚರಣೆ

ನೆಲ್ಯಾಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) 17ನೇ ಸಂಸ್ಥಾಪನಾ ದಿನಾಚರಣೆಯನ್ನು ಎಸ್ಡಿಪಿಐ ನೆಲ್ಯಾಡಿ ಗ್ರಾಮ ಸಮಿತಿಯ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನೆಲ್ಯಾಡಿಯಲ್ಲಿ ನಡೆಯಿತು.

ಎಸ್ ಡಿಪಿಐ ನೆಲ್ಯಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಸಿದ್ದೀಕ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಎಸ್ ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್ ಅವರು ಸಂಸ್ಥಾಪನಾ ದಿನದ ಸಂದೇಶ ಭಾಷಣವನ್ನು ಮಾಡಿದರು.

ಕಾರ್ಯಕ್ರಮದಲ್ಲಿ ಕಡಬ ಬ್ಲಾಕ್ ಸಮಿತಿಯ ಅಧ್ಯಕ್ಷ ಬಶೀರ್ ಕಡಬ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ರಫೀಕ್ ಬೈಲ್ ಹಾಗೂ ಹನೀಫ್ ಬೈಲ್ ಹಾಗೂ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು.

ಸಿದ್ದೀಕ್ ನೆಲ್ಯಾಡಿ ಸ್ವಾಗತಿಸಿದರು. ಅನ್ಸಾರ್ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.

  •  

Leave a Reply

You May Have Missed

error: Content is protected !!