ಉಜಿರೆ ಎಸ್ ಡಿ ಎಂ ಪಿಯು ಕಾಲೇಜಿನಲ್ಲಿ ಯೋಗ ಶಿಬಿರ ಉದ್ಘಾಟನೆ

SDM

ಉಜಿರೆ ಎಸ್ ಡಿ ಎಂ ಪಿಯು ಕಾಲೇಜಿನಲ್ಲಿ ಯೋಗ ಶಿಬಿರ ಉದ್ಘಾಟನೆ

ಉಜಿರೆ: ವಿಶ್ವ ಯೋಗ ದಿನದ ಪ್ರಯುಕ್ತ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ವತಿಯಿಂದ ಯೋಗ  ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಧ್ಯಾಪಕಿ ಡಾ. ಹರ್ಷಿಣಿ ಉದ್ಘಾಟಿಸಿ ಮಾತನಾಡಿದ ಅವರು “ಯೋಗ ಮನಸ್ಸನ್ನು ಹತೋಟಿಯಲ್ಲಿ ಇಡಲು ಸಹಕಾರಿ, ಪ್ರತಿ ದಿನ ಯೋಗ ಮಾಡುವುದರಿಂದ ಉತ್ತಮ ಅರೋಗ್ಯ ಕಾಪಾಡಿಕೊಳ್ಳಬಹುದು” ಎಂದು ಹೇಳಿದರು 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ “ಯೋಗ ಶಿಬಿರದಲ್ಲಿ ಕಲಿತ ಯೋಗ ಜ್ಞಾನವನ್ನು ಬರಿ ಇಲ್ಲಿಗೆ ಸೀಮಿತಗೊಳಿಸದೆ ಮುಂದೆಯೂ ಅಳವಡಿಸಿಕೊಂಡು  ಅರೋಗ್ಯವಂತ ಜೀವನ ನಡೆಸುವಂತಾಗಲಿ” ಎಂದು ಹೇಳಿದರು.

ವೇದಿಕೆಯಲ್ಲಿ ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಡಾ.ಚೇತನಾ ಭಟ್, ಜೀವ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಕೋಮಲ್ ಪಿ.ಸಿ, ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹಯೋಜನಾಧಿಕಾರಿ ಶೋಭಾ.ಪಿ ಉಪಸ್ಥಿತರಿದ್ದರು.

ನಾಗಲಕ್ಷ್ಮಿ ಸ್ವಾಗತಿಸಿದರು. ಸ್ವಯಂ ಸೇವಕಿ ರಾಶಿಕಾ ಕಾರ್ಯಕ್ರಮದ ನಿರೂಪಿಸಿದರು. ಮೌಲ್ಯ ವಂದಿಸಿದರು.

  •  

Leave a Reply

You May Have Missed

error: Content is protected !!