ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

Nellyadi

ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಶಿಕ್ಷಕ- ರಕ್ಷಕ ಸಂಘದ ಸಭೆಯು ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರದಂದು ನಡೆಯಿತು.

2025- 26ನೇ ಸಾಲಿನ ಶಿಕ್ಷಕರ- ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಸನ್ನಿ.ಕೆ.ಎಸ್, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್, ನಿಷ್ಮಾ ಆರೀಫ್, ಜೊತೆ ಕಾರ್ಯದರ್ಶಿಯಾಗಿ ಮೇರಿ ಸ್ಟೆಫಿ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಫಾ.ಜೈಸನ್ ಸೈಮನ್ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಫಾ.ಡಾ.ವರ್ಗೀಸ್ ಕೈಪನಡ್ಕ, ಫಾ.ಆದರ್ಶ ಜೋಸೆಫ್, ಫಾ.ಶ್ಯಾಮುವೆಲ್, ಕಾಲೇಜಿನ ಮುಖ್ಯಶಿಕ್ಷಕ ಜಾರ್ಜ್ ಕೆ ತೋಮಸ್, ಜೋಸ್ ಪ್ರಕಾಶ್, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಸನ್ನಿ.ಕೆ ಉಪಸ್ಥಿತರಿದ್ದರು.

ಕಾಲೇಜಿನ ಮುಖ್ಯಶಿಕ್ಷಕ ಜಾರ್ಜ್ ಕೆ ತೋಮಸ್ ಸ್ವಾಗತಿಸಿದರು, ಹಿರಿಯಶಿಕ್ಷಕಿ ರಾಜಮ್ಮ ಕಾರ್ಯಕ್ರಮ ನಿರೂಪಿಸಿದರು, ಜೋಸ್ ಪ್ರಕಾಶ್ ವಂದಿಸಿದರು.

  •  
Previous post

ಕಾಂಚನ ಪೆರ್ಲ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ‘ಚಿನ್ನೆರ್’ ಜಿನೇಂದ್ರಕುಮಾರ್ ಜೈನ್ ನಿಧನ

Next post

ಕೊಕ್ಕಡಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಭೇಟಿ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿಯ ದರ್ಶನ, ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನ

Leave a Reply

You May Have Missed

error: Content is protected !!