ಕೊಕ್ಕಡಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಭೇಟಿ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿಯ ದರ್ಶನ, ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನ

Sowthadka

ಕೊಕ್ಕಡಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಭೇಟಿ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿಯ ದರ್ಶನ, ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನ

ಕೊಕ್ಕಡ: ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ರಾಜ್ಯ ಉಸ್ತುವಾರಿ ನಿಗಮ್ ಭಂಡಾರಿ ಕೊಕ್ಕಡಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

ಅವರು ಮೊದಲಿಗೆ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿಯ ದರ್ಶನ ಪಡೆದರು. ಈ ವೇಳೆ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸಮಿತಿಯ ಸದಸ್ಯ ವಿಶ್ವನಾಥ ಕೊಲ್ಲಾಜೆ ಹಾಗೂ ಇತರರು ಉಪಸ್ಥಿತರಿದ್ದರು. ದೇವಸ್ಥಾನದ ವತಿಯಿಂದ ಅತಿಥಿಗಳನ್ನು ಗೌರವಿಸಲಾಯಿತು.

ಬಳಿಕ ಅವರು ಕೊಕ್ಕಡ ಯುವ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು, ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ.ನಾಗೇಶ್ ಕುಮಾರ್ ಗೌಡ, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಸ್.ಕೆ. ಹಕೀಮ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಪವನ್ ಕೊಲ್ಲಾಜೆ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಚ್. ಮೊಹಮ್ಮದ್ ಕಲಂದರ್, ಯುವ ಕಾಂಗ್ರೆಸ್ ಕ್ಷೇತ್ರ ಕಾರ್ಯದರ್ಶಿ ವಾಜಿದ್, ಡಿಜಿಟಲ್ ಯೂಥ್ ಸದಸ್ಯ ಆಸಿಫ್ ಐಡಿಯಲ್ ಉಪಸ್ಥಿತರಿದ್ದರು.

ಕೊಕ್ಕಡ ಎಂಡೋಪಾಲನ ಕೇಂದ್ರಕ್ಕೆ ಭೇಟಿ ನೀಡಿ, ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ಆಚರಣೆ ನಡೆಸಿದರು. ಈ ಸಂದರ್ಭ, ಎಂಡೋಪಾಲನ ಕೇಂದ್ರಕ್ಕೆ ಬೋರ್ವೆಲ್ ಕೊಡುಗೆಯಾಗಿ ನೀಡುವುದಾಗಿ ರಾಜ್ಯ ಅಧ್ಯಕ್ಷ ಮಂಜುನಾಥ್ ಗೌಡ ಘೋಷಿಸಿದರು.

  •  
Previous post

ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

Next post

ಶಿಶಿಲ ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Leave a Reply

You May Have Missed

error: Content is protected !!