ಕಡಬ ಕ್ನಾನಾಯ ಜ್ಯೋತಿ ಶಾಲೆಯಲ್ಲಿ ಡ್ರಗ್ಸ್ ಜಾಗೃತಿ ಕಾರ್ಯಾಗಾರ

Kadaba

ಕಡಬ ಕ್ನಾನಾಯ ಜ್ಯೋತಿ ಶಾಲೆಯಲ್ಲಿ ಡ್ರಗ್ಸ್ ಜಾಗೃತಿ ಕಾರ್ಯಾಗಾರ

ಕಡಬ: ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರದಲ್ಲಿ ಶಾಲೆಯ ಪೂರ್ವ ವಿದ್ಯಾರ್ಥಿ, ಪ್ರಸ್ತುತ ಕಡಬದ ಜೆ.ಎಂ.ಜೆ. ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ಆದರ್ಶ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದೋಷ, ಅದರ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಮತ್ತು ಸಮಾಜದ ಮೇಲೆ ಬೀರುವ ನಕಾರಾತ್ಮಕ ಪರಿಣಾಮಗಳ ಕುರಿತು ಮಾತನಾಡಿದರು. ಜೊತೆಗೆ, ವಿದ್ಯಾರ್ಥಿಗಳ ಜವಾಬ್ದಾರಿ ಮತ್ತು ನೈತಿಕತೆ ಬಗ್ಗೆ ಅರಿವು ಮೂಡಿಸುತ್ತಾ, ಉತ್ತಮ ವ್ಯಕ್ತಿತ್ವ ರೂಪಿಸುವ ಕಡೆಗೆ ಚಿಂತನೆ ಮಾಡುವಂತೆ ಪ್ರೇರೇಪಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿ ರಂಜಿತ್ ಹಾಗೂ ಶಾಲಾ ಶಿಕ್ಷಕವೃಂದ, ವಿದ್ಯಾರ್ಥಿಗಳು ಭಾಗವಹಿಸಿದರು.

ಮುಖ್ಯಶಿಕ್ಷಕಿ ಮರಿಯಾ ಲೂಯಿಸ್ ಸ್ವಾಗತಿಸಿದರು. ಶಿಕ್ಷಕರಾದ ಶೈಜು ಕಾರ್ಯಕ್ರಮ ನಿರೂಪಿಸಿದರು, ವಿದ್ಯಾರ್ಥಿನಿ ಅನ್ವಿತಾ ವಂದಿಸಿದರು.

  •  

Leave a Reply

You May Have Missed

error: Content is protected !!