ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಶಾಲಾ ಸಂಸತ್ತಿನ ಉದ್ಘಾಟನೆ

Nellyadi

ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಶಾಲಾ ಸಂಸತ್ತಿನ ಉದ್ಘಾಟನೆ

ನೆಲ್ಯಾಡಿ: ಸಮಾಜದಲ್ಲಿ ದುಶ್ಚಟಗಳಿಗೆ ಬಲಿಯಾಗದೆ ಸದೃಢ ಸಮಾಜದ ನಿರ್ಮಾಣಕ್ಕೆ ಸಮರ್ಥ ನಾಯಕರಾಗಿ ಹಿಂದೆಂದೂ ಇರದ, ಮುಂದೆಂದೂ ಆಗದ ಕೆಲಸಕಾರ್ಯಗಳು ನಿಮ್ಮಿಂದಾಗಲಿ ಎಂದು ರಾಷ್ಟ್ರೀಯ ಸೇವಿಕಾ ಸಮಿತಿ ಕಾರ್ಯಕರ್ತೆ ಪೂರ್ಣಿಮಾ ಭಾಸ್ಕರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ನಡೆದ ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀರಾಮ ವಿದ್ಯಾಲಯದ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಅವರದೇ ಆದ ವಿಶೇಷ ಸಾಮರ್ಥ್ಯವಿರುತ್ತದೆ. ಆ ಸಾಮರ್ಥ್ಯಗಳನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯಶಿಕ್ಷಕ ಗಣೇಶ್ ವಾಗ್ಲೆ ನೂತನ ಸಂಸತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾವ್ಯ ಮಾತಾಜಿ ಸ್ವಾಗತಿಸಿದರು, ಸುಜನ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ಸುಪ್ರೀತಾ ಮಾತಾಜಿ ವಂದಿಸಿದರು.

  •  

Leave a Reply

You May Have Missed

error: Content is protected !!