ನೆಲ್ಯಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Nellyadi

ನೆಲ್ಯಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನೆಲ್ಯಾಡಿಯ 43ನೇ ವರುಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಗುರುವಾರದಂದು ಕಳೆದ ಸಾಲಿನ ಅಧ್ಯಕ್ಷರಾದ ರವಿಚಂದ್ರ ಅತ್ರಿಜಾಲ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ವೇಳೆ ನೂತನ ಅಧ್ಯಕ್ಷರಾಗಿ ಮೋಹನ್ ಗೌಡ ಕಟ್ಟೆಮಜಲು , ಕಾರ್ಯದರ್ಶಿಯಾಗಿ ಕೇಶವ ಕುಸಲ್ದ್ ಕಿಚ್ಚ ನೆಲ್ಯಾಡಿ, ಉಪಾಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿಯಾಗಿ ರಾಕೇಶ್ ಎಸ್, ಜೊತೆ ಕಾರ್ಯದರ್ಶಿಯಾಗಿ ಸಂದೇಶ್ ಶೆಟ್ಟಿ ಅಮ್ಮುಂಜೆ ಆಯ್ಕೆಯಾದರು.

ದೇವಸ್ಥಾನದ ಅಧ್ಯಕ್ಷ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ಸುಧೀರ್ ಕುಮಾರ್, ರವಿಚಂದ್ರ ಹೊಸವಕ್ಲು, ರಕ್ಷಿತ್ ಮಡಿವಾಳ ಮತ್ತಿತರರು ಉಪಸ್ಥಿತರಿದ್ದು ನೂತನ ತಂಡಕ್ಕೆ ಶುಭಹಾರೈಸಿದರು.

  •  

Leave a Reply

You May Have Missed

error: Content is protected !!