ಮೈಸೂರು ದಸರಾದಲ್ಲಿ ಕಂಬಳ? – ಸಚಿವ ಸಂಪುಟ ಪೂರ್ವಭಾವಿ ಸಭೆಯಲ್ಲಿ ಚರ್ಚೆ, ಶಾಸಕ ಅಶೋಕ್ ರೈಗೆ ಡಿಕೆಶಿ ಪ್ರಶ್ನೆ

Puttur

ಮೈಸೂರು ದಸರಾದಲ್ಲಿ ಕಂಬಳ? – ಸಚಿವ ಸಂಪುಟ ಪೂರ್ವಭಾವಿ ಸಭೆಯಲ್ಲಿ ಚರ್ಚೆ, ಶಾಸಕ ಅಶೋಕ್ ರೈಗೆ ಡಿಕೆಶಿ ಪ್ರಶ್ನೆ

ಪುತ್ತೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮದ ರೂಪುರೇಖೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದವು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಲವು ಪ್ರಮುಖ ಸಚಿವರು ಈ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ತುಳುನಾಡಿನ ಪರಂಪರೆಗೂ ಮಹತ್ವ ನೀಡುವ ನಿಟ್ಟಿನಲ್ಲಿ “ಕಂಬಳ” ನಡೆಸುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ.

“ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಸುತ್ತೀರಾ?” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪುತ್ತೂರಿನ ಶಾಸಕ ಅಶೋಕ್ ರೈ ಅವರನ್ನು ನೇರವಾಗಿ ಪ್ರಶ್ನಿಸಿದರು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ಅಶೋಕ್ ರೈ, “ಸರ್ಕಾರದ ಅನುಮತಿ ಸಿಕ್ಕರೆ ಮೈಸೂರಲ್ಲಿ ಕೂಡ ಕಂಬಳ ನಡೆಸುವ ಬಗ್ಗೆ ಆಲೋಚನೆ ಮಾಡುತ್ತೇನೆ,” ಎಂದು ತಿಳಿಸಿದರು.

  •  

Leave a Reply

You May Have Missed

error: Content is protected !!