ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗೆ ರಸ್ತೆ ಅಪಘಾತದಲ್ಲಿ ದುರ್ಮರಣ

Bantwala

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗೆ ರಸ್ತೆ ಅಪಘಾತದಲ್ಲಿ ದುರ್ಮರಣ

ಬಂಟ್ವಾಳ: ಬಿಸಿ ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಂಟ್ವಾಳದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮೃತಪಟ್ಟಿದ್ದಾರೆ.

ಸೋಮವಾರ (ಜೂನ್ 30) ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂದು ಗುರುತಿಸಲಾಗಿದೆ. ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಬಿಸಿ ರೋಡ್ ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಕ್ರಾಸ್ ಮಾಡುವ ಸಂದರ್ಭ, ಮಂಗಳೂರು ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಚಿದಾನಂದರು ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ತೀವ್ರ ಗಾಯಗಳೊಂದಿಗೆ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಬಂಧ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು.

  •  

Leave a Reply

You May Have Missed

error: Content is protected !!